ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನವೇ ಬಸವರಾಜ ಬೊಮ್ಮಾಯಿ ಅವರು ಹಲವು ಮಹತ್ವದ ಘೋಷಣೆ ಗಳನ್ನು ಮಾಡಿದ್ದಾರೆ. ಇದರ ಜೊತೆಗೆ ಕೆಲವು ಯೋಜನೆಗಳಲ್ಲಿ ನೀಡುವ ಮಾಶಾಸನವನ್ನು ಹೆಚ್ಚಳ ಮಾಡುವಂತೆ ಆದೇಶವನ್ನು ಹೊರಡಿಸಿದ್ದಾರೆ. ಹಾಗಾದರೆ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಪ್ರಥಮ ಸಚಿವ ಸಂಪುಟ ಸಭೆಯಲ್ಲಿ ನಡೆಸಿದಂತಹ ಸುದ್ದಿಗೋಷ್ಠಿಯಲ್ಲಿ ಹಲವು ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ಯಾವುದೆಲ್ಲ ಯೋಜನೆಗಳಿಗೆ ಎಷ್ಟು ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದು ಈ ಪೋಸ್ಟ್ನಲ್ಲಿ ಸಂಪೂರ್ಣವಾಗಿ ತಿಳಿಯೋಣ.
New schemes announced by basavaraj bommai- ನೂತನ ಮುಖ್ಯಮಂತ್ರಿಗಳಿಂದ ರಾಜ್ಯದ ಜನತೆಗೆ ಗುಡ್ ನ್ಯೂಸ್.
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ ಜಾರಿಗೊಳಿಸಿದ್ದಾರೆ. ಸಂಧ್ಯಾ ಸುರಕ್ಷಾ ಯೋಜನೆಯ ಪಿಂಚಣಿಯ ಮೊತ್ತವನ್ನು ಹೆಚ್ಚಿಸಿದ್ದಾರೆ, ಇದರ ಜೊತೆಯಲ್ಲಿಯೇ ಮುಂದಿನ ಆಡಳಿತದ ಬಗ್ಗೆ ಕೆಲವು ಮಾಹಿತಿಯನ್ನು ಸಹ ನೀಡಿದ್ದಾರೆ. ರಾಜ್ಯದ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿಯನ್ನು ನೀಡಲಿದ್ದಾರೆ. ಜನಪರ ಆಡಳಿತ ನೀಡುವುದು ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ. ಸಮಾಜದ ಪ್ರತಿಯೊಬ್ಬರ ಪರವಾಗಿಯೂ ನಮ್ಮ ಸರ್ಕಾರ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.
Vikas Patra Scheme-ಪೋಸ್ಟ್ ಆಫೀಸ್ ನಲ್ಲಿ ಹಣ ಡಬಲ್ ಆಗುವ ಸ್ಕೀಮ್.
New schemes announced by basavaraj bommai- ನೂತನ ಮುಖ್ಯಮಂತ್ರಿಗಳಿಂದ ರಾಜ್ಯದ ಜನತೆಗೆ ಗುಡ್ ನ್ಯೂಸ್.
ದಕ್ಷ, ಪ್ರಾಮಾಣಿಕ, ಜನಪರ ಆಡಳಿತ ಇರಲಿದೆ ಎಂದು ಹೇಳಲಾಗಿದೆ. ಸಾರ್ವಜನಿಕ ಎಲ್ಲಾ ವರ್ಗದ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ. ಇದರ ಜೊತೆಗೆ ವಿಶ್ವಾಸಾರ್ಹ, ಜವಾಬ್ದಾರಿಯುತ, ಪಾರದರ್ಶಕ ಹಾಗೂ ದಕ್ಷ ಆಡಳಿತ ನೀಡಲು ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಪ್ರವಾಹಪೀಡಿತ ಪರಿಸ್ಥಿತಿ ಎದುರಿಸುವುದು ಹಾಗೂ covid-19 ನಿಯಂತ್ರಣ ಹಾಗೂ ನಿರ್ವಹಣೆ ಮಾಡುವುದು ನಮ್ಮ ಆದ್ಯತೆ ಆಗಿದೆಯೆಂದು ಬೊಮ್ಮಾಯಿಯವರು ಹೇಳಿದ್ದಾರೆ.
Labour card benefits 2021- ಕಾರ್ಮಿಕ ಕಾರ್ಡ್ ಇದ್ದವರಿಗೆ 55,000 ರೂಪಾಯಿ ಸಹಾಯಧನ.
New schemes announced by basavaraj bommai- ನೂತನ ಮುಖ್ಯಮಂತ್ರಿಗಳಿಂದ ರಾಜ್ಯದ ಜನತೆಗೆ ಗುಡ್ ನ್ಯೂಸ್.
ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ, ಮಾಶಾಸನ ಹೆಚ್ಚಳ ಮಾಡಲು ಆದೇಶವನ್ನು ಹೊರಡಿಸಿದ್ದಾರೆ. ಈ ಹೊಸ ಯೋಜನೆಗೆ 1 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದಾರೆ. ಸಾಮಾಜಿಕ ಭದ್ರತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಂಧ್ಯಾ ಸುರಕ್ಷಾ ಯೋಜನೆ ಯಲ್ಲಿ ನೀಡಲಾಗುತ್ತಿದ್ದ ಪಿಂಚಣಿಯ ಮೊತ್ತವನ್ನು 1 ಸಾವಿರ ರೂಪಾಯಿಂದ 1200 ರೂಪಾಯಿಗೆ ಹೆಚ್ಚಳ ಮಾಡಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 861.52 ಕೋಟಿಯಷ್ಟು ಹೆಚ್ಚುವರಿಯಾಗಿ ವೆಚ್ಚವಾಗಲಿದೆ. ಒಟ್ಟು 39.92 ಲಕ್ಷ ಫಲಾನುಭವಿಗಳಿಗೆ ಉಪಯೋಗವಾಗಲಿದೆ.
Poultry farming scheme-ಕೋಳಿ ಸಾಕಾಣಿಕೆ ಮಾಡುವವರಿಗೆ ರಾಜ್ಯ ಸರ್ಕಾರದಿಂದ 4 ಲಕ್ಷ ಸಹಾಯಧನ.
New schemes announced by basavaraj bommai- ನೂತನ ಮುಖ್ಯಮಂತ್ರಿಗಳಿಂದ ರಾಜ್ಯದ ಜನತೆಗೆ ಗುಡ್ ನ್ಯೂಸ್.
ವಿಧವಾ ವೇತನವನ್ನು 600 ರೂಪಾಯಿಯಿಂದ 800 ರೂಪಾಯಿಯವರೆಗೆ ಹೆಚ್ಚಿಸಲಾಗಿದ್ದು, ಇದರಿಂದ 414 ಕೋಟಿ ಹೆಚ್ಚುವರಿಯಾಗಿ ವೆಚ್ಚವಾಗಲಿದೆ. ಒಟ್ಟು 17.25 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಅದರಂತೆಯೇ ಅಂಗವಿಕಲರ ಮಾಸಿಕ ವೇತನವನ್ನು ಸಹ 600 ರೂಪಾಯಿಂದ 800 ರೂಪಾಯಿಯbommaiವರೆಗೆ ಹೆಚ್ಚಳ ಮಾಡಲಾಗಿದ್ದು, 90 ಕೋಟಿ ರೂಪಾಯಿ ಹೆಚ್ಚುವರಿಯಾಗಿ ವೆಚ್ಚವಾಗಲಿದೆ. ಈ ಯೋಜನೆಯಿಂದ 3.66 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ.
PM kissan samman nidhi yojana-ಕಿಸಾನ್ ಸಮ್ಮಾನ್ ಯೋಜನೆಯ 9ನೇ ಕಂತಿನ ಹಣ ಬಿಡುಗಡೆ.