Student scholarship – ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.

2019-20 ಹಾಗೂ 2020-21 ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಸಿಬಿಎಸ್‍ಸಿ/ ಐಸಿಎಸ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ SMIS ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

www.sw.kar.nic.in

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಸಿಬಿಎಸ್‍ಸಿ/ ಐಸಿಎಸ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇ.60 ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು.

ಅರ್ಜಿ ನಮೂನೆಯೊಂದಿಗೆ ವ್ಯಾಸಂಗ ಮಾಡಿದ ಶಾಲೆಯಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ದೃಢೀಕರಣ ಪ್ರಮಾಣ ಪತ್ರ ದೃಢೀಕರಣ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

Student scholarship – ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.

ಅರ್ಜಿಯನ್ನು ಸಲ್ಲಿಸಬೇಕಾದ ಕಚೇರಿ ವಿವರ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ ಮಡಿಕೇರಿ 08272-225531, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ -08276-281115, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ -08274-249476 ನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

Student scholarship – ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.

Leave a Comment